ಶುಕ್ರವಾರ ರಾಜ್ಯಕ್ಕೆ ಬರಲಿದ್ದಾರೆ ಕೃಷ್ಣ

ಬೆಂಗಳೂರು,ಅ.೩೦-ವಿದೇಶಾಂಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಸ್‌.ಎಂ.ಕೃಷ್ಣ ಇದೇ ಶುಕ್ರವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಕೃಷ್ಣ ಆಗಮನವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿರುವ ಪ್ರದೇಶ ಕಾಂಗ್ರೆಸ್‌ ಅವರಿಗೆ ಭವ್ಯ ಸ್ವಾಗತ ಏರ್ಪಡಿಸಲು ನಿರ್ಧರಿಸಿದೆ. ಈ ಸಂಬಂಧ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ನಾಳೆ ಮುಖಂಡರ ಸಭೆ ಕರೆದಿದ್ದು, ಸಭೆಯಲ್ಲಿ ಕೃಷ್ಣ ಅವರನ್ನು ರಾಜ್ಯ ರಾಜಕಾರಣದಲ್ಲಿ ಬಳಸಿಕೊಳ್ಳುವ ಸಂಬಂಧ ಚರ್ಚೆ ನಡೆಸುಮದಲ್ಲದೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪಕ್ಷದ ಕಚೇರಿಯವರೆಗೂ ಅವರನ್ನು ಭವ್ಯ ಮೆರವಣಿಗೆಯಲ್ಲಿ ಕರೆತರುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯ ವಿಧಾನಸಭೆಗೆ ಮಾರ್ಚ್‌-ಏಪ್ರಿಲ್‌ ೨೦೧೩ರ ವೇಳೆಗೆ ಇಲ್ಲವೆ ಅದಕ್ಕೂ ವೊದಲು ಚುನಾವಣೆ ನಡೆಯುವ ಸಾಧ್ಯತೆ ಇರುಮದರಿಂದ ಕೃಷ್ಣ ಅವರನ್ನು ಬೆಂಗಳೂರು ನಗರ ಸೇರಿದಂತೆ ಹಳೆ ಮೈಸೂರು ವಿಭಾಗದಲ್ಲಿ ಹೆಚ್ಚಿನ ಪ್ರಚಾರಕ್ಕೆ ಬಳಸಿಕೊಳ್ಳಲು ಕೆಪಿಸಿಸಿ ನಿರ್ಧರಿಸಿದೆ. ವೊದಲ ಹಂತದಲ್ಲಿ ಹಳೆ ಮೈಸೂರು ವಿಭಾಗದ ಪ್ರತಿ ಜಿಲ್ಲೆಯಲ್ಲೂ ಕಾರ್ಯಕರ್ತರ ಮತ್ತು ಮುಖಂಡರ ಸಭೆ ನಡೆಸುಮದರ ಮೂಲಕ ಕೃಷ್ಣ ಅವರನ್ನು ಮುಂದಿಟ್ಟುಕೊಂಡು ಚುನಾವಣೆಗೆ ತೆರಳಲು ವೇದಿಕೆ ಸಿದ್ಧಗೊಳ್ಳುತ್ತಿದೆ. ಕೃಷ್ಣ ಆಗಮನದಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಸಂಚಲನ ಮೂಡಲಿದೆ. ಹೀಗಾಗಿ ನವಚೈತನ್ಯದೊಂದಿಗೆ ಪಕ್ಷ ಸಂಘಟನೆಗೆ ಅವ ಕಾಶವಾಗಲಿದೆ. ಮುಂದಿನ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಅವರ ಆಗಮನ ಸಹಕಾರಿಯಾಗಲಿದೆ ಎಂಬುದು ರಾಜ್ಯ ಕಾಂಗ್ರೆಸಿಗರ ವಾದವಾಗಿದೆ.

No Comments to “ಶುಕ್ರವಾರ ರಾಜ್ಯಕ್ಕೆ ಬರಲಿದ್ದಾರೆ ಕೃಷ್ಣ”

add a comment.

Leave a Reply

You must be logged in to post a comment.